
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ನಗರದ ಸಂಚಾರ ಪೊಲೀಸರು, ಕಳೆದ ಎಂಟು ದಿನಗಳಲ್ಲಿ 4,147 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದವರ ವಿರುದ್ಧ ಡಿ.22ರಿಂದ 30ರವರೆಗೆ ನಗರದಾದ್ಯಂತ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 3,01,577ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ಮಾಡಲಾಯಿತು. ಸಂಚಾರ ನಿಯಮ ಉಲ್ಲಂಘಿಸಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.
ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.