ADVERTISEMENT

ಬೆಂಗಳೂರು | ₹2.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಪ್ರಜೆ ಬಂಧನ

ಬಾಗಲೂರು ಠಾಣೆ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 14:45 IST
Last Updated 2 ಸೆಪ್ಟೆಂಬರ್ 2025, 14:45 IST
ಚಿಕೋಜಿ ಹೇಡಾಹಾ
ಚಿಕೋಜಿ ಹೇಡಾಹಾ   

ಬೆಂಗಳೂರು: ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು ಡ್ರಗ್ಸ್‌ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಬಾಗಲೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಚಿಕೋಜಿ ಹೇಡಾಹಾ ಬಂಧಿತ ಆರೋಪಿ.

ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ADVERTISEMENT

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್‌ ಗೆಸ್ಟ್‌ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.