
ಬೆಂಗಳೂರು: ಹೊರ ರಾಜ್ಯದಿಂದ ಮಾದಕ ವಸ್ತುವನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ₹4 ಲಕ್ಷ ಮೌಲ್ಯದ 4 ಕೆ.ಜಿ ಗಾಂಜಾ, 37 ಗ್ರಾಂ ಎಂಡಿಎಂಎ, 35 ಗ್ರಾಂ ಹ್ಯಾಶಿಸ್ ಆಯಿಲ್, ತೂಕದ ಯಂತ್ರ, ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಹೊರ ರಾಜ್ಯದ ವ್ಯಕ್ತಿಗಳಿಂದ ಮಾದಕ ವಸ್ತುವನ್ನು ಆರೋಪಿಗಳು ಕಡಿಮೆ ಬೆಲೆಗೆ ಖರೀದಿಸುತ್ತಿದ್ದರು. ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು. ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸುಬ್ರಮಣ್ಯಪುರ ಪೊಲೀಸ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಉತ್ತರಹಳ್ಳಿ ಪೂರ್ಣಪ್ರಜ್ಞಾ ನಗರದ ನರ್ಸರಿ ರಸ್ತೆಯ ಬಳಿ ದಾಳಿ ಮಾಡಿ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.