ADVERTISEMENT

ಬೆಂಗಳೂರು | ಮುಂದುವರಿದ ಕಾರ್ಯಾಚರಣೆ: ₹18.60 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 18:24 IST
Last Updated 4 ಡಿಸೆಂಬರ್ 2025, 18:24 IST
ಜಪ್ತಿ ಮಾಡಿಕೊಂಡ ಡ್ರಗ್ಸ್ 
ಜಪ್ತಿ ಮಾಡಿಕೊಂಡ ಡ್ರಗ್ಸ್    

ಬೆಂಗಳೂರು: ಡ್ರಗ್ಸ್‌ ವಿರುದ್ಧ ನಗರದ ವಿವಿಧ ಠಾಣಾ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಪ್ರತ್ಯೇಕ ಐದು ಪ್ರಕರಣಗಳಲ್ಲಿ ₹18.60 ಕೋಟಿ ಮೌಲ್ಯದ ಹೈಡ್ರೊಗಾಂಜಾ ಸೇರಿದಂತೆ ವಿವಿಧ ಮಾದರಿಯ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. 

ಆರ್‌ಎಂಸಿ ಯಾರ್ಡ್‌, ಆರ್‌.ಟಿ. ನಗರ, ಜೆ.ಸಿ. ನಗರ, ಮಹಾಲಕ್ಷ್ಮಿಲೇಔಟ್‌ ಹಾಗೂ ಮಲ್ಲೇಶ್ವರ ಠಾಣೆಯ ಪೊಲೀಸರು, 10 ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ರಾಣಿ ಅಬ್ಬಕ್ಕ ಮೈದಾನದ ಬಳಿ ಮಹಿಳೆಯೊಬ್ಬರು ಹೈಡ್ರೊಗಾಂಜಾವನ್ನು ಕಾರಿನಲ್ಲಿ ಇಟ್ಟುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ಬಂಧಿಸಿದ್ದಾರೆ.

ADVERTISEMENT

ಬ್ಯಾಗ್‌ನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 8 ಕೆ.ಜಿ. 350 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.

ಜೆ.ಸಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ವಿದೇಶಿ ಡ್ರಗ್ಸ್‌ ಪೆಡ್ಲರ್‌ ಬಂಧಿಸಿದ್ದಾರೆ. ಆರೋಪಿಯಿಂದ 21 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್‌ ಜಪ್ತಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.