ADVERTISEMENT

ಬೆಂಗಳೂರು: ₹75 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ; ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 16:21 IST
Last Updated 4 ನವೆಂಬರ್ 2025, 16:21 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಬಂಡೇಪಾಳ್ಯ ಮತ್ತು ಮಲ್ಲೇಶ್ವರ ಠಾಣೆ ಪೊಲೀಸರು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಸೇರಿ ಐವರನ್ನು ಬಂಧಿಸಿದ್ದಾರೆ.

ನೈಜೀರಿಯಾ ದೇಶದ ಇಬಾನುಗೊ(35) ಎಂಬಾತನನ್ನು ಬಂಡೇಪಾಳ್ಯ ಠಾಣೆ ಪೊಲೀಸರು ಬಂಧಿಸಿ ₹75 ಲಕ್ಷ ಮೌಲ್ಯದ 752 ಗ್ರಾಂ ಎಂಡಿಎಂಎ, 8 ಗ್ರಾಂ ಕೋಕೇನ್ ಹಾಗೂ ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ADVERTISEMENT

2018ರಲ್ಲಿ ವ್ಯವಹಾರಿಕ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿ, ದೆಹಲಿಯಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಬಳಿಕ ಮೂರು ತಿಂಗಳ ಹಿಂದೆ ನಗರಕ್ಕೆ ಬಂದು ಬಂಡೇಪಾಳ್ಯದಲ್ಲಿ ಸ್ನೇಹಿತರ ಮನೆಯಲ್ಲಿ ವಾಸವಾಗಿದ್ದ. ಅಪರಿಚಿತರ ಮೂಲಕ ಮಾದಕ ವಸ್ತುಗಳಾದ ಎಂಡಿಎಂಎ ಮತ್ತು ಕೋಕೇನ್‌ಗಳನ್ನು ತರಿಸಿಕೊಂಡು ಟೆಕಿ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಇತರೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮಲ್ಲೇಶ್ವರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹19.70 ಲಕ್ಷ ಮೌಲ್ಯದ ಗಾಂಜಾ, ಹ್ಯಾಶೀಸ್ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.