ADVERTISEMENT

‌ಬೆಂಗಳೂರು | ವೃದ್ಧ ಸಜೀವ ದಹನ, ಶಾರ್ಟ್‌ ಸರ್ಕಿಟ್ ಶಂಕೆ 

ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 14:24 IST
Last Updated 19 ಫೆಬ್ರುವರಿ 2026, 14:24 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ವೃದ್ಧರೊಬ್ಬರು ಮನೆಯಲ್ಲಿ ಸಜೀವ ದಹನವಾಗಿರುವ ಘಟನೆ ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಗುರುವಾರ ನಸುಕಿನ ವೇಳೆ ನಡೆದಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಲಾರಪ್ಪ(80) ಸಜೀವದಹನ ಆದವರು.

ADVERTISEMENT

ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಿಲ್ಲ. ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ, ತುರ್ತುಸೇವಾ ದಳದ ಸಿಬ್ಬಂದಿ ಹಾಗೂ ಸೀನ್‌ ಆಫ್‌ ಕ್ರೈಂ (ಸುಕೊ) ತಂಡದ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣವಾದ ಮೇಲೆ ಕಾರಣ ಪತ್ತೆ ಆಗಲಿದೆ ಎಂದು ಪೊಲೀಸರು ಹೇಳಿದರು.

‘ಮೈಲಾರಪ್ಪ ಅವರಿಗೆ ನಾಲ್ವರು ಮಕ್ಕಳಿದ್ದು ಎಲ್ಲರೂ ಪ್ರತ್ಯೇಕ ಮನೆಗಳಲ್ಲಿ ವಾಸವಿದ್ದಾರೆ. ಮೈಲಾರಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮೊಮ್ಮಕ್ಕಳು ಪ್ರತಿನಿತ್ಯ ಮನೆಗೆ ಬಂದು ಮೈಲಾರಪ್ಪ ಅವರ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬುಧವಾರ ರಾತ್ರಿ ಊಟ ಮಾಡಿ ಮಲಗಿದ್ದರು. ಆ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಷ್ಟರಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ನಾಲ್ವರು ಮಕ್ಕಳಿಗೂ ಮೈಲಾರಪ್ಪ ಅವರು ಆಸ್ತಿ ಪಾಲು ಮಾಡಿಕೊಟ್ಟಿದ್ದರು. ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಗಲಾಟೆ ನಡೆದಿರಲಿಲ್ಲ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆದರೂ, ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.