ಬೆಂಗಳೂರು: ಬೀದಿನಾಯಿಗಳ ದಾಳಿಗೆ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಕೊಡಿಗೆಹಳ್ಳಿ ಠಾಣಾ ವ್ಯಾಪ್ತಿಯ ಟೆಲಿಕಾಂ ಲೇಔಟ್‌ನಲ್ಲಿ ತಡರಾತ್ರಿ ನಡೆದಿದೆ.
ನಾಯಿಗಳ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸೀತಪ್ಪ (68) ಮೃತಪಟ್ಟಿದ್ದಾರೆ.
ತಡರಾತ್ರಿ ಮನೆಯಿಂದ ಹೊರಬಂದಿದ್ದ ಸೀತಪ್ಪ ಅವರ ಮೇಲೆ 7-8 ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾರದೆ ನೆಲಕ್ಕೆ ಬಿದ್ದ ಅವರ ಕೈ, ಕಾಲು, ಮುಖಕ್ಕೆ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು.
ಸಮೀಪದಲ್ಲಿದ್ದ ಗಸ್ತು ಪೊಲೀಸರು ನಾಯಿಗಳಿಂದ ಸೀತಪ್ಪ ಅವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಪುತ್ರ ದೂರು ನೀಡಿದ್ದು, ಕೊಡಿಗೆಹಳ್ಳಿ ಠಾಣೆಯಲ್ಲಿ ಯುಡಿಆರ್ (ಅಸಹಜ ಸಾವು ಪ್ರಕರಣ) ವರದಿಯಾಗಿದೆ.
ಬೀದಿನಾಯಿ ದಾಳಿಯಿಂದ ಮೃತಪಟ್ಟ ಸೀತಪ್ಪ ಕುಟುಂಬಸ್ಥರಿಗೆ ₹1 ಲಕ್ಷ ಪರಿಹಾರ ಕೊಡುವುದಾಗಿ ಬಿಬಿಎಂಪಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.