ADVERTISEMENT

ಬೆಂಗಳೂರು: ಬೆಂಕಿ ಅವಘಡ; 19 ಇ.ವಿ ಸ್ಕೂಟರ್‌ಗೆ ಹಾನಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 14:20 IST
Last Updated 2 ಅಕ್ಟೋಬರ್ 2025, 14:20 IST
ಇ.ವಿ ಶೋರೂಂನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಆವರಿಸಿದ್ದ ದಟ್ಟ ಹೊಗೆ 
ಇ.ವಿ ಶೋರೂಂನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಆವರಿಸಿದ್ದ ದಟ್ಟ ಹೊಗೆ    

ಬೆಂಗಳೂರು: ಕನಕಪುರ ರಸ್ತೆಯ ಯಲಚೇನಹಳ್ಳಿಯ ಎಲೆಕ್ಟ್ರಿಕ್‌ ಸ್ಕೂಟರ್‌ಗಳಿದ್ದ(ಇ.ವಿ) ಶೋರೂಂ ಒಂದರಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು 19 ಇ.ವಿ ಸ್ಕೂಟರ್‌ಗಳು ಅಗ್ನಿಗೆ ಆಹುತಿಯಾಗಿವೆ. ಅವಘಡವು ಬೆಳಿಗ್ಗೆ ಸಂಭವಿಸಿದ್ದರಿಂದ ಶೋರೂಂನಲ್ಲಿ ಯಾರೂ ಇರಲಿಲ್ಲ.

ಬೆಳಿಗ್ಗೆ 7.45ರ ಸುಮಾರಿಗೆ ಅಗ್ನಿಶಾಮಕದ ದಳದ ಸಹಾಯವಾಣಿಗೆ ಬಂದ ಕರೆ ಆಧರಿಸಿ ಎರಡು ವಾಹನಗಳಲ್ಲಿ ಸ್ಥಳಕ್ಕೆ ತೆರಳಿದ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಎರಡು ಗಂಟೆ ಕಾರ್ಯಾಚರಣೆ ನಡೆಸಿ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಯಿತು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ನೆಲ ಮಹಡಿಯಲ್ಲಿ ಉಂಟಾದ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಎಲೆಕ್ಟ್ರಿಕ್‌ ಸ್ಕೂಟರ್‌ಗಳನ್ನು ಚಾರ್ಜ್‌ಗೆ ಹಾಕಿದ್ದ ಸಂದರ್ಭದಲ್ಲಿ ಬ್ಯಾಟರಿಗಳು ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.