ಆಟೊ
ಬೆಂಗಳೂರು: ಸರ್ಕಾರ ನಿಗದಿಪಡಿಸಿದ ಪ್ರಯಾಣ ದರಕ್ಕಿಂತ ಅಧಿಕ ದರ ವಸೂಲಿ ಮಾಡುತ್ತಿರುವ ಆಟೊಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆಯನ್ನು ಮಂಗಳವಾರವೂ ಮುಂದುವರೆಸಿರುವ ಸಾರಿಗೆ ಕಚೇರಿ ಅಧಿಕಾರಿಗಳು 183 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೆ 56 ಆಟೊಗಳನ್ನು ಜಪ್ತಿ ಮಾಡಿದ್ದಾರೆ.
ಬೆಂಗಳೂರು ಕೇಂದ್ರ, ಬೆಂಗಳೂರು ಪಶ್ಚಿಮ, ಬೆಂಗಳೂರು ಪೂರ್ವ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಜ್ಞಾನಭಾರತಿ, ದೇವನಹಳ್ಳಿ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್. ಪುರ, ಚಂದಾಪುರ, ನೆಲಮಂಗಲ, ರಾಮನಗರ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.