ಅಗ್ನಿ ಅವಘಡ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಉದಯ್ ಭಾನು (40), ಬಿಹಾರದ ರೋಷನ್ (23) ಮೃತಪಟ್ಟ ಕಾರ್ಮಿಕರು. ಗುತ್ತಿಗೆದಾರ ಸತೀಶ್ ಅವರಿಗೆ ಸೇರಿದ ಶಿವಾನಿ ಗ್ರೀನ್ ಬಡಾವಣೆಯಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲಾಗಿತ್ತು. ಮರಗೆಲಸ ಮಾಡುತ್ತಿದ್ದ ವೇಳೆ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.