
ಪ್ರಜಾವಾಣಿ ವಾರ್ತೆ
ಬೆಂಗಳೂರು: ಗೋವಾದ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತಿರುವ ನಗರ ಪೊಲೀಸರು, ಪಬ್‌ಗಳು ಹಾಗೂ ಬೃಹತ್ ಕಟ್ಟಡಗಳಲ್ಲಿ ಅಳವಡಿಸಿಕೊಂಡಿರುವ ಅಗ್ನಿ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಮುಂದಾಗಿದ್ದಾರೆ.
ಪಬ್ ಹಾಗೂ ಬೃಹತ್ ಕಟ್ಟಡಗಳನ್ನು ಪರಿಶೀಲನೆ ನಡೆಸುವಂತೆ ಅಗ್ನಿಶಾಮಕ ಇಲಾಖೆಗೂ ಪತ್ರ ಬರೆಯಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಅವರು ತಿಳಿಸಿದರು.
ಡಿಸೆಂಬರ್ 31ರಂದು ರಾತ್ರಿ ಹೊಸ ವರ್ಷಾಚರಣೆ ನಡೆಯಲಿದ್ದು, ಬಂದೋಬಸ್ತ್‌ಗೆ ಸಂಬಂಧಿಸಿದಂತೆ ನಗರದ 11 ವಿಭಾಗದಲ್ಲೂ ಡಿಸಿಪಿಗಳ ನೇತೃತ್ವದಲ್ಲಿ ಸಭೆ ನಡೆದಿದೆ. ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.