
ಬೆಂಗಳೂರು: ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಟೆಕಿ ಶರ್ಮಿಳಾ (34) ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುಬ್ರಹ್ಮಣ್ಯ ಲೇಔಟ್‌ನ ವಸತಿ ಸಮುಚ್ಚಯದ ಫ್ಲ್ಯಾಟ್‌ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು (ಎಫ್‌ಎಸ್ಎಲ್) ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶರ್ಮಿಳಾ ಅವರು ನಗರದ ಸಾಫ್ಟ್‌ವೇರ್ ಕಂಪನಿಯಲ್ಲಿ ಟೆಕಿಯಾಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತೆಯ ಜತೆಗೆ ಫ್ಲ್ಯಾಟ್‌ನಲ್ಲಿ ತಂಗಿದ್ದರು. ಸ್ನೇಹಿತ ಊರಿಗೆ ತೆರಳಿದ್ದ ವೇಳೆ ಶನಿವಾರ ಘಟನೆ ನಡೆದಿತ್ತು ಎಂದು ಪೊಲೀಸರು ಹೇಳಿದರು.
‘ಸದ್ಯ ಕೊಠಡಿಯಲ್ಲಿ ಎಫ್‌ಎಸ್‌ಎಲ್ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಜ್ಞರು ವರದಿ ನೀಡಿದ ಬಳಿಕವೇ ಬೆಂಕಿ ಅವಘಡ ಹೇಗೆ ಸಂಭವಿಸಿತ್ತು ಎಂಬುದು ಗೊತ್ತಾಗಲಿದೆ. ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದೆಯೇ ಅಥವಾ ವಿದ್ಯುತ್ ಶಾರ್ಟ್ ಸರ್ಕಿಟ್ ಕಾರಣವೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.