ADVERTISEMENT

ಬೆಂಗಳೂರಿಗೆ ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 23:02 IST
Last Updated 5 ಸೆಪ್ಟೆಂಬರ್ 2022, 23:02 IST
   

ಬೆಂಗಳೂರು:ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿದ್ದರಿಂದ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮಂಡಳಿಯ ಟಿ. ಕೆ.ಹಳ್ಳಿ ಘಟಕಕ್ಕೆ ನೀರು ನುಗ್ಗಿದ್ದು, ಯಂತ್ರಗಳು ಮುಳುಗಡೆಯಾಗಿವೆ. ಇದರಿಂದ, ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ.

ಹೀಗಾಗಿ, ಇದೇ 6ರಂದು ನಗರದ ಹಲವುಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ
ವಾಗಲಿದೆ.ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರು ಬಳಿ ಇರುವ ಟಿ.ಕೆ. ಹಳ್ಳಿಯಲ್ಲಿರುವ ಈ ಘಟಕಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಜಲ ಮಂಡಳಿ ಅಧಕ್ಷರು, ಎಂಜಿನಿಯರ್‌ಗಳು ಹಾಗೂ ನಗರಾಭಿ ವೃದ್ಧಿ ಇಲಾಖೆ ಕಾರ್ಯದರ್ಶಿಗಳು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT