ಸಿದ್ದರಾಮಯ್ಯ ನಗರ ಪ್ರದಕ್ಷಿಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಪ್ರದಕ್ಷಿಣೆ ಮಾಡಿ ನಗರದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರು ಉಪಸ್ಥಿತರಿದ್ದರು. ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.
ಯಲಹಂಕ...
ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.
ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ...
ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.
ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.
ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ...
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.
ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.
ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.
ಸಾಯಿ ಲೇಔಟ್..
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.
ಬಳಿಕ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.