ADVERTISEMENT

ಬೆಂಗಳೂರು: ಹೋಟೆಲ್‌ ನವೀಕರಣ ಕಾಮಗಾರಿ ವೇಳೆ ಕಂಬಗಳು ಬಿದ್ದು ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2026, 18:22 IST
Last Updated 2 ಫೆಬ್ರುವರಿ 2026, 18:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಮರ್‌ ಹೋಟೆಲ್‌ನಲ್ಲಿ ನವೀಕರಣ ಕಾಮಗಾರಿ ನಡೆಸಲು ಅಳವಡಿಸಿದ್ದ ಕಂಬಗಳು ಬಿದ್ದು, ಮೂವರು ಗಾಯಗೊಂಡಿದ್ದಾರೆ.

ಹೋಟೆಲ್‌ನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ನಡೆಯುತ್ತಿದ್ದ ಸ್ಥಳದ ಪಕ್ಕದಲ್ಲಿ ಸಾರ್ವಜನಿಕರು ನಿಂತಿದ್ದರು. ಏಕಾಏಕಿ ಕಂಬಗಳು ಬಿದ್ದಿದ್ದರಿಂದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.