
ಪ್ರಜಾವಾಣಿ ವಾರ್ತೆ
ಬಂಧನ
(ಪ್ರಾತಿನಿಧಿಕ ಚಿತ್ರ)
ನೆಲಮಂಗಲ: ಬೆಂಗಳೂರು ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಿಥುನ್(26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆ ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಮಂಗಳವಾರ ನೆಲಮಂಗಲ ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ರಚಿಸಿದ್ದ ತಂಡವು ಬಂಧಿಸಿ ನೆಲಮಂಗಲಕ್ಕೆ ಕರೆತಂದಿದೆ.
ಪೊಲೀಸ್ ಬಾತ್ಮೀದಾರರು ಎಂದು ಹೇಳಿಕೊಂಡು ಏಳು ಮಂದಿ ಆರೋಪಿಗಳು ಬಾಡಿಗೆ ಮನೆಯೊಂದಕ್ಕೆ ನುಗ್ಗಿ ದರೋಡೆ ನಡೆಸಿ, ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದರು. 6 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಿಥುನ್ ಪತ್ತೆಗೆ ಮುಂದಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.