
ಬಂಧನ
ಬೆಂಗಳೂರು: ಯಶವಂತಪುರ ಹಾಗೂ ಆರ್.ಟಿ ನಗರ ಠಾಣೆಯ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಎರಡು ಕೆ.ಜಿ ಗಾಂಜಾ ಜಪ್ತಿ ಮಾಡಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಯಶವಂತಪುರ ರೈಲು ನಿಲ್ದಾಣ ಬಳಿಯಿರುವ ಕೇಂದ್ರೀಯ ವಿದ್ಯಾಲಯದ ಎದುರು ವ್ಯಕ್ತಿಯೊಬ್ಬ ನಿಷೇಧಿತ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಬಂದಿತ್ತು. ಇದನ್ನು ಆಧರಿಸಿ, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು. ಆರೋಪಿಯಿಂದ ₹1.20 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಚಾಮುಂಡಿನಗರದಲ್ಲಿ ಆರ್.ಟಿ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ₹40 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಹೊರರಾಜ್ಯದ ಡ್ರಗ್ಸ್ ಪೆಡ್ಲರ್‌ಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಟೆಕಿಗಳು ಹಾಗೂ ಪೇಯಿಂಗ್ ಗೆಸ್ಟ್‌ನಲ್ಲಿ ನೆಲಸಿರುವ ವ್ಯಕ್ತಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.