ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಜೆ.ಸಿ. ನಗರ ಹಾಗೂ ಮಲ್ಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಬಂಧಿಸಿರುವ ಪೊಲೀಸರು, ₹1.60 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಗಾಂಜಾ ಸಂಗ್ರಹಿಸಿಕೊಂಡು ನಿರ್ಜನ ಪ್ರದೇಶದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಜೆ.ಸಿ.ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹1 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮಲ್ಲೇಶ್ವರ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೆ.ಜಿ 850 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.
ಪುಣೆ ಹಾಗೂ ಪೀಣ್ಯದ ನೆಲಗದರನಹಳ್ಳಿಯಲ್ಲಿ ಇರುವ ಮಧ್ಯವರ್ತಿಗಳಿಂದ ಆರೋಪಿಗಳು ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.