
ಪ್ರಜಾವಾಣಿ ವಾರ್ತೆ
ಬೇಕಾಬಿಟ್ಟಿ ಕಸ ಎಸೆದು ಹೋಗುವವರ ಮನೆ ಮುಂದೆ 'ಕಸದ ಹಬ್ಬ ಶುರು' ಮಾಡಿದ GBA!
ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಇಂದು ರಸ್ತೆ ಬದಿ ಹಾಗೂ ಎಲ್ಲೆಂದರಲ್ಲಿ ಕಸ ಹಾಕುವವರ ಮನೆಗಳನ್ನು ಪತ್ತೆ ಹಚ್ಚಿ ಅವರವರ ಮನೆಯ ಮುಂದೆ ಕಸ ಹಾಕಿ, ದಂಡ ವಿಧಿಸಲಾಯಿತು.
ಇನ್ನು ಮುಂದೆ ರಸ್ತೆ ಬದಿ ಕಸ ಬಿಸಾಡದಂತೆ, ನಗರ ಪಾಲಿಕೆ ವತಿಯಿಂದ ಮನೆ ಮನೆಯ ಹತ್ತಿರ ಬರುವ ಆಟೋ ಟಿಪ್ಪರ್ ಗಳಿಗೆ ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ, ನಿಗದಿತ ಸಮಯದಲ್ಲಿ ಕಸವನ್ನು ನೀಡುವಂತೆ ಜಾಗೃತಿ ಮೂಡಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.