
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಗೋವಿಂದರಾಜನಗರ ಠಾಣಾ ವ್ಯಾಪ್ತಿಯ ಪಂಚಮಶೀಲನಗರದ ಮನೆಯೊಂದರಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಸರ್‌ನಿಂದ ಅನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಸೋಮವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಚಾಂದಿನಿ (30) ಹಾಗೂ ಯುವಿ ಕಿರಣ್ (4) ಮೃತರು.
ಚಾಂದಿನಿ ಅವರ ಪತಿ ಕಿರಣ್ ಅವರು ಕಾರ್ಪೆಂಟರ್ ಕೆಲಸಕ್ಕೆ ತೆರಳಿದ್ದರು. ದಂಪತಿಯ ಮೊದಲ ಮಗಳು ಶಾಲೆಗೆ ತೆರಳಿದ್ದರು. ಶಾಲೆಗೆ ತೆರಳಿದ್ದ ಪುತ್ರಿಯನ್ನು ಕಿರಣ್ ಅವರ ಸಹೋದರ ಸೋಮವಾರ ಮಧ್ಯಾಹ್ನ ಮನೆಗೆ ಕರೆದುಕೊಂಡು ಬಂದಿದ್ದರು. ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಬಾಗಿಲು ಒಡೆದು ಪರಿಶೀಲಿಸಿದಾಗ ಸ್ನಾನದ ಕೋಣೆಯಲ್ಲಿ ಅಸ್ವಸ್ಥರಾಗಿ ತಾಯಿ ಹಾಗೂ ಮಗಳು ಬಿದ್ದಿರುವುದು ಕಂಡುಬಂತು. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.