ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜೆ.ಸಿ.ರಸ್ತೆ ನಿವಾಸಿ ವಿಶಾಖ (27) ಮೃತ ಸವಾರ. ಭಾನುವಾರ ರಾತ್ರಿ 12.50ಕ್ಕೆ ಗಾಂಧಿನಗರದ ವೈ.ರಾಮಚಂದ್ರ ರಸ್ತೆಯ ಟಿಒಟಿ ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿದೆ. ಚಾಲಕ ಸರಕು ಸಾಗಣೆ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ನೋಂದಣಿ ಸಂಖ್ಯೆ ಆಧರಿಸಿ ವಾಹನ ಪತ್ತೆ ಮಾಡಿ, ಚಾಲಕನನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಚನ್ನಪಟ್ಟಣದ ವಿಶಾಖ, ಜೆ.ಸಿ.ರಸ್ತೆಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದರು. ಎಸ್.ಸಿ.ರಸ್ತೆ ಕಡೆಯಿಂದ ಗಾಂಧಿನಗರದ ವೈ.ರಾಮಚಂದ್ರ ರಸ್ತೆ ಟಿಒಟಿ ಜಂಕ್ಷನ್ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜನತಾ ಬಜಾರ್ ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ವಿಶಾಖ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಉಪ್ಪಾರ ಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.