ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆಯಿಂದ ತದರಾತ್ರಿವರೆಗೂ ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯಿತು.
ನಗರದಲ್ಲಿ ಕೆಲವು ದಿನಗಳಿಂದ ಮಳೆ ಬಿಡುವು ನೀಡಿದ್ದರಿಂದ ಉಷ್ಣಾಂಶ ಹೆಚ್ಚಾಗಿತ್ತು. ಬುಧವಾರ ಬೆಳಿಗ್ಗೆಯಿಂದ ಮೋಡದ ವಾತಾವರಣವಿತ್ತು. ಸಂಜೆ ನಂತರ ಗುಡುಗು, ಬಿರುಗಾಳಿ ಸಹಿತ ಮಳೆಯಾಯಿತು.
ಹುಣಸಮಾರನಹಳ್ಳಿಯಲ್ಲಿ ಮಳೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣ ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿತ್ತು.
ಮೈಸೂರು ರಸ್ತೆ, ಪಶ್ಚಿಮ ಕಾರ್ಡ್ ರಸ್ತೆ, ವಿಠ್ಠಲ ಮಲ್ಯ ರಸ್ತೆ, ಜೆಸಿ ರಸ್ತೆ, ಬಳ್ಳಾರಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು.
ಹೆಚ್ಚು ಮಳೆ: ನಾಗಪುರ, ಬಸವೇಶ್ವರ ನಗರದಲ್ಲಿ ತಲಾ 3.5 ಸೆಂ.ಮೀ, ವಿದ್ಯಾಪೀಠದಲ್ಲಿ ತಲಾ
3 ಸೆಂ.ಮೀ, ರಾಜಾಜಿನಗರ, ಪಟ್ಟಾಭಿರಾಮನಗರ, ಹಂಪಿನಗರ, ಜಕ್ಕೂರು, ರಾಜಮಹಲ್ ಗುಟ್ಟಹಳ್ಳಿಯಲ್ಲಿ ತಲಾ 2.5 ಸೆಂ.ಮೀ, ಕೋರಮಂಗಲ, ರಾಜರಾಜೇಶ್ವರಿ ನಗರ, ದಯಾನಂದ ನಗರ, ಪೀಣ್ಯ ಕೈಗಾರಿಕೆ ಪ್ರದೇಶ, ಚೌಡೇಶ್ವರಿ, ಯಲಹಂಕ, ನಂದಿನಿ ಲೇಔಟ್, ಹೆಮ್ಮಿಗೆಪುರದಲ್ಲಿ ತಲಾ 2 ಸೆಂ.ಮೀ. ಮಳೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.