ADVERTISEMENT

ಬೆಂಗಳೂರು: ಮೂರು ಗಂಟೆ ಭಾರಿ ಮಳೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 16:23 IST
Last Updated 30 ಆಗಸ್ಟ್ 2020, 16:23 IST
ಮಳೆ
ಮಳೆ    

ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಿಗೂ ಅಧಿಕ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಸದರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎಚ್ಚರ ವಹಿಸುವಂತೆ ಇಲಾಖೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT