ADVERTISEMENT

ಬೆಂಗಳೂರು: ರಾತ್ರಿ ವೇಳೆ ಮೇಲ್ಸೇತುವೆಯಲ್ಲಿ ಸಂಚಾರ ಬಂದ್

​ಪ್ರಜಾವಾಣಿ ವಾರ್ತೆ
Published 17 ಮೇ 2025, 23:30 IST
Last Updated 17 ಮೇ 2025, 23:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನಲೆಯಲ್ಲಿ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12ರಿಂದ 3 ಗಂಟೆವರೆಗೆ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನ ಸಂಚಾರ ಬಂದ್ ಆಗಿರಲಿದೆ. 

ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗೆ ಮೂರು ತಾಸು ಸಂಚಾರಕ್ಕೆ ನಿರ್ಬಂಧವಿದ್ದು, ಈ ಅವಧಿಯಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ನಗರ ಸಂಚಾರ ಪೊಲೀಸರು ಕೋರಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್ ಮಾಲ್‌ನಲ್ಲಿ ಇರುವ ಸರ್ವೀಸ್‌ ರಸ್ತೆ ಪ್ರವೇಶಿಸಿ, ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲ ರಸ್ತೆಗೆ ಬಲಕ್ಕೆ ತಿರುವು ಪಡೆಯಬೇಕು. ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡಕ್ಕೆ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತ ತಲುಪಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.