
ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಆಸ್ಪತ್ರೆಯಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಜಯನಗರದಲ್ಲಿ ಇರುವ ಆಸ್ಪತ್ರೆಯೊಂದರ ಕಾರ್ಯಕಾರಿ ನಿರ್ದೇಶಕರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ತ್ರಿವಿಕ್ರಂ ರಾವ್ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮೂರು ದಿನಗಳ ಹಿಂದೆ ಸಂತ್ರಸ್ತೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ದೂರು ನೀಡಿದ ಮಹಿಳೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಸಭೆ ಹಾಗೂ ವೃತ್ತಿ ಸಂಬಂಧ ಚರ್ಚೆ ನಡೆಸುವುದಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ’ ಎಂದು ದೂರು ನೀಡಲಾಗಿದೆ.
‘ದೂರಿನ ಮೇರೆಗೆ ಆರೋಪಿ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ. ತ್ರಿವಿಕ್ರಂ ರಾವ್ ಅವರು ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.