ADVERTISEMENT

ಬೆಂಗಳೂರು: ಖಾಸಗಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಮುಟ್ಟುಗೋಲು

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 0:45 IST
Last Updated 21 ನವೆಂಬರ್ 2025, 0:45 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ನೋಂದಣಿ ಪತ್ರ ಪಡೆಯದೇ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

‘ದಕ್ಷಿಣ ತಾಲ್ಲೂಕು ವ್ಯಾಪ್ತಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿರುವ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಯಂತ್ರವನ್ನು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ ಕಾಯಿದೆ ಪ್ರಕಾರ ಬಳಸದೇ ಇರುವುದು ಕಂಡುಬಂದಿತು. ದಾಖಲೆಗಳನ್ನು ಸರಿಯಾಗಿ ನಿರ್ವಹಿಸದೇ ಇರುವುದರಿಂದ ಮುಟ್ಟುಗೋಲು ಹಾಕಿಕೊಳ್ಳಲಾಯಿತು’ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರವಿಂದ್ರನಾಥ್ ಎಂ. ಮೇಟಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.