ಸಾವು
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹುಳಿಮಾವು ಬಳಿಯ ಎಲೇನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
ಬೇಗೂರು ನಿವಾಸಿಯಾಗಿದ್ದ ಶ್ರೀನಿವಾಸ್ ಅವರು ಸ್ನೇಹಿತ ದೀಪಕ್ ಜತೆ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಶ್ರೀನಿವಾಸ್ ಆಟೊ ಚಾಲಕರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲನೆ ಮಾಡುತ್ತಿದ್ದ ದೀಪಕ್ ಅವರ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅವರ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಶ್ರೀನಿವಾಸ್, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೀಪಕ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹುಳಿಮಾವು ಸಂಚಾರ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.