ADVERTISEMENT

ಕರ್ತವ್ಯ ಲೋಪ: ಬೆಂಗಳೂರಿನ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್ MS ರವಿ ಅಮಾನತು

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 23:00 IST
Last Updated 20 ಜನವರಿ 2026, 23:00 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕರ್ತವ್ಯಲೋಪ ಆರೋಪದ ಮೇಲೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಎಸ್‌.ರವಿ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಾಂತ್‌ ಕುಮಾರ್ ಮಂಗಳವಾರ ಆದೇಶಿಸಿದ್ದಾರೆ.

2025ರ ಸೆಪ್ಟಂಬರ್‌ ಮೊದಲ ವಾರದಲ್ಲಿ ಮಲ್ಲತ್ತಹಳ್ಳಿಯಲ್ಲಿ ಅನ್ನಪೂರ್ಣೇಶ್ವರಿನಗರ ನಿವಾಸಿ ದೀಪಕ್ ರಾಜ್‌ (18) ಎಂಬ ಯುವಕನ ಹತ್ಯೆಯಾಗಿತ್ತು. ಆದರೆ, ಜ್ಞಾನಭಾರತಿ ಠಾಣಾಧಿಕಾರಿ ರವಿ ಅವರು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಯಾವುದೇ ಪ್ರಕರಣ ದಾಖಲಿಸಿಕೊಂಡಿರಲಿಲ್ಲ. ಆದರೆ, ತಾವರೆಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದರು.

ADVERTISEMENT

ತನಿಖೆ ವೇಳೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ ಎಂಬುುದು ಗೊತ್ತಾಗಿ, ಮತ್ತೆ ಇದೇ ಠಾಣೆಗೆ ವರ್ಗಾವಣೆ ಮಾಡಿದ್ದರು. ಹೀಗಾಗಿ ಸೆ.13ರಂದು ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯದ ಆರೋಪದ ಮೇರೆಗೆ ಅವರ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಡಿಸಿಪಿ ವರದಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.