ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಲ್ಲಿ ವ್ಯತ್ಯಾಸದ ಸಂಬಂಧ ನಗರದ ಗ್ಲೋಬಲ್ ಸಿಟಿ ಇಂಟರ್‌ನ್ಯಾಷನಲ್ ಸಮೂಹದ ಶಾಲಾ–ಕಾಲೇಜುಗಳು ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ನಗರದ ವಿವಿಧೆಡೆ ಇರುವ, ಗ್ಲೋಬಲ್ ಸಿಟಿ ಇಂಟರ್‌ನ್ಯಾಷನಲ್ ಸಮೂಹದ ಶಾಲೆ–ಕಾಲೇಜು, ಆಡಳಿತ ಮಂಡಳಿ ಸದಸ್ಯರ ಮನೆಗಳು ಸೇರಿ ಒಟ್ಟು ಏಳು ಕಡೆ ದಾಳಿ ನಡೆದಿದೆ. ಶಿಕ್ಷಣ ಸಂಸ್ಥೆ ಮತ್ತು ಆಡಳಿತ ಮಂಡಳಿ ಸದಸ್ಯರ ಬ್ಯಾಂಕ್ ಖಾತೆಗಳು, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ವಿವರಗಳನ್ನು ಪರಿಶೀಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ವಿವರ, ಶಾಲಾ–ಕಾಲೇಜು ಕಾರ್ಯನಿರ್ವಹಣೆ ಮತ್ತು ನಿರ್ವಹಣಾ ವೆಚ್ಚಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಸದಸ್ಯರನ್ನು ಪ್ರಶ್ನಿಸಲಾಗಿದೆ. ಬುಧವಾರ ತಡರಾತ್ರಿವರೆಗೂ ಶೋಧ ಮುಂದುವರೆದಿತ್ತು ಎಂದು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.