ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆ ನ.29ರಿಂದ ಆರಂಭವಾಗಲಿದ್ದು, ಬಿಬಿಎಂಪಿ ಮತ್ತು ಮುಜರಾಯಿ ಇಲಾಖೆ ಸಿದ್ಧತೆ ಮಾಡಿಕೊಂಡಿವೆ.
ಬಸವಣ್ಣ ದೇವಸ್ಥಾನದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಲಾಗಿದೆ. ಶಾಮಿಯಾನ, ದೀಪಾಲಂಕಾರ, ಶೌಚಾಲಯ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ಸೇರಿ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಗ್ನಿಶಾಮಕ, ತುರ್ತು ವೈದ್ಯಕೀಯ ಸೌಲಭ್ಯಕ್ಕೂ ಸಜ್ಜು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತರು(ದಕ್ಷಿಣ) ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.