ADVERTISEMENT

ಬೆಂಗಳೂರು | ವಕೀಲನ ಮೇಲೆ ಹಲ್ಲೆ: ಮೂವರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 22:39 IST
Last Updated 15 ಫೆಬ್ರುವರಿ 2026, 22:39 IST
   

ಬೆಂಗಳೂರು: ಖಾಸಗಿ ಕಟ್ಟಡದ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವಕೀಲರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ ಮೂವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಾಜಿನಗರ ನಿವಾಸಿ ಆದರ್ಶ್‌ ಗಂಗಲ್ ಅವರ ದೂರಿನ ಮೇಲೆ ಸತೀಶ್‌ ಹಾಗೂ ಮತ್ತಿಬ್ಬರು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿ, ಆರೋಪಿಗಳ ಪತ್ತೆಗೆ ತನಿಖೆ ನಡೆಸ ಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಫೆಬ್ರುವರಿ 6ರಂದು ಚರ್ಚ್‌ ಸ್ಟ್ರೀಟ್‌ನ ಕಲ್ಪಕಾ ಆರ್ಕೇಡ್‌ನಲ್ಲಿರುವ ಕಚೇರಿಯಿಂದ ರಾತ್ರಿ ಕೆಲಸ ಮುಗಿಸಿ ಕೊಂಡು ಮನೆಗೆ ತೆರಳುವ ವೇಳೆ ಕಟ್ಟಡ ದ ಪ್ಯಾಸೇಜ್‌ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡು ಮೂತ್ರ ವಿಸರ್ಜನೆ ಮಾಡದಂತೆ ಹೇಳಿದೆ. ಇದರಿಂದ ಕೋಪಗೊಂಡ ಸತೀಶ್ ಹಾಗೂ ಅಲ್ಲಿಯೇ ಮದ್ಯ ಕುಡಿಯುತ್ತಿದ್ದ ಇಬ್ಬರು ವ್ಯಕ್ತಿಗಳು ಅವಾಚ್ಯ ಶಬ್ಧಗಳಿಂದ ನಿಂದಿಸಿ, ನನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾದರು’ ಎಂದು ಆದರ್ಶ್ ದೂರಿನಲ್ಲಿ ತಿಳಿಸಿದ್ದಾರೆ .

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.