
ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ವಿದ್ಯಾರ್ಥಿಯೊಬ್ಬ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದ ಪರಿಣಾಮ ಹೈಕೋರ್ಟ್ ವಕೀಲರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಜಯನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎಚ್‌ಎಸ್‌ಆರ್ ಲೇಔಟ್ ನಿವಾಸಿ ರಾಮರೆಡ್ಡಿ(56) ಮೃತ ವಕೀಲ.
ಕೃತ್ಯ ಎಸಗಿದ ಹುಬ್ಬಳ‍್ಳಿಯ ಬಿಇ ವಿದ್ಯಾರ್ಥಿ ಶ್ರೇಯಸ್ (19) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರ್‌ಎಂವಿ 2ನೇ ಹಂತದ ರಸ್ತೆಯಲ್ಲಿ ರಾತ್ರಿ 9 ಗಂಟೆಗೆ ದುರ್ಘಟನೆ ನಡೆದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಶ್ರೇಯಸ್ ನಗರದ ಖಾಸಗಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ. ಬುಧವಾರ ರಾತ್ರಿ ಬಿಇಎಲ್ ರಸ್ತೆ ಮಾರ್ಗವಾಗಿ ಆರ್‌ಎಂವಿ 2ನೇ ಹಂತದ ರಸ್ತೆ ಕಡೆ ಕಾರಿನಲ್ಲಿ ಬರುತ್ತಿದ್ದ. ನಿಯಂತ್ರಣ ತಪ್ಪಿ ಮೊದಲಿಗೆ ರಾಮರೆಡ್ಡಿ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ನಂತರ ಒಂದು ಬೈಕ್‌ಗೆ ಗುದ್ದಿದೆ. ಬಳಿಕ ರಸ್ತೆ ಬಂದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದರಿಂದ ಆರೋಪಿಯ ಕಾರು ಸೇರಿ 2 ಕಾರು ಮತ್ತು 1 ಬೈಕ್ ಜಖಂಗೊಂಡಿವೆ. ಬೈಕ್ ಚಾಲಕ ಹಾಗೂ ಕಾರಿನಲ್ಲಿದ್ದ ಯುವಕ-ಯುವತಿಗೆ ಗಾಯವಾಗಿದ್ದು, ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಕೀಲ ಸ್ಥಲದಲ್ಲೇ ಮೃತಪಟ್ಟಿದ್ದಾರೆ.
ಸಂಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.