ADVERTISEMENT

ವಕೀಲರು ಮುಂಚೂಣಿ ಯೋಧರೆಂದು ಪರಿಗಣಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 15 ಮೇ 2021, 18:37 IST
Last Updated 15 ಮೇ 2021, 18:37 IST

ಬೆಂಗಳೂರು: ವಕೀಲರನ್ನು ಕೋವಿಡ್ ಮುಂಚೂಣಿ ಯೋಧರೆಂದು ಪರಿಗಣಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘ ಮನವಿ ಸಲ್ಲಿಸಿದೆ. ಕೋವಿಡ್‌ನಿಂದ ಮೃತಪಟ್ಟ ವಕೀಲರಿಗೆ ₹30 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆ.

‘ನ್ಯಾಯಾಂಗದ ಕಾರ್ಯ ಕಾಲಪಗಳು ಸ್ಥಗಿತಗೊಳ್ಳದಂತೆ ನೋಡಿಕೊಳ್ಳಲು ವಕೀಲರು ಸಾಕಷ್ಟು ಶ್ರಮಿಸಿದ್ದಾರೆ. ನಿಸ್ವಾರ್ಥ ಸೇವೆ ನೀಡುತ್ತಿದ್ದ ಅನೇಕ ವಕೀಲರು ಕೋವಿಡ್‌ಗೆ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’ ಎಂದು ಹೇಳಿದೆ.

‘ಅನೇಕ ವಕೀಲರು ಈಗ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾರೆ. ಜೀವನ ನಡೆಸಲೂ ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಎಲ್ಲ ಆಸ್ಪತ್ರೆಗಳಲ್ಲಿ ವಕೀಲರಿಗೆ ಉಚಿತವಾಗಿ ಚಿಕಿತ್ಸೆ ದೊರೆಕಿಸಬೇಕು’ ಎಂದು ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.