ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮಹಿಳೆಯರ ಉಡುಪುಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹೆಬ್ಬುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಗೋಡಿ ನಿವಾಸಿ ಅಮಲ್(23) ಬಂಧಿತ ಆರೋಪಿ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವ್ಯಕ್ತಿಯೊಬ್ಬ ಕಟ್ಟಡದ ಮೇಲೆ ಮತ್ತು ಮನೆಯ ಅಂಗಳದಲ್ಲಿ ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುವುದು, ಅವುಗಳನ್ನು ಧರಿಸಿ, ಫೋಟೊ ತೆಗೆದುಕೊಂಡು ಸಾರ್ವಜನಿಕವಾಗಿ ಪ್ರದರ್ಶಿಸುತ್ತಿರುವ ಮಾಹಿತಿ ಪೊಲೀಸರಿಗೆ ಬಂದಿತ್ತು.
ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ತೆರಳಿ, ವಕ್ತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮಹಿಳೆಯರ ಒಳ ಉಡುಪು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.
ಪ್ರಾಥಮಿಕ ತನಿಖೆ ವೇಳೆ, ಆರೋಪಿ ಅಮಲ್, ಮಹಿಳೆಯರ ಒಳ ಉಡುಪುಗಳನ್ನು ಕದ್ದು, ಅವನ್ನು ಧರಿಸಿಕೊಂಡು ಫೋಟೊ ತೆಗೆದುಕೊಂಡಿರುವ ಹಲವಾರು ಫೋಟೊಗಳು ದೊರೆತಿವೆ. ನಂತರ ಆತ ವಾಸವಿದ್ದ ಮನೆಯ ಪರಿಶೀಲನೆ ಮಾಡಿದಾಗ, ಮನೆಯಲ್ಲಿಯೂ ಮಹಿಳೆಯರ ಒಳ ಉಡುಪುಗಳನ್ನು ಸಂಗ್ರಹಿಸಿಟ್ಟುಕೊಂಡಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.