
ಬಂಧನ
ಬೆಂಗಳೂರು: ವಿವಾಹ ಆಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಅವರಿಗೆ ವಂಚಿಸಿದ್ದ ಆರೋಪಿಯನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಥಣಿಸಂದ್ರದ ನಿವಾಸಿ ಮೊಹಮ್ಮದ್ ಇಶಾಕ್ (30) ಬಂಧಿತ.
ಯುವತಿಗೆ ಇನ್‌ಸ್ಟಾಗ್ರಾಂ ಮೂಲಕ ಇಶಾಕ್ ಪರಿಚಯವಾಗಿದ್ದ. ಇಬ್ಬರ ನಡುವೆ ಸ್ನೇಹವಾಗಿತ್ತು. ಯುವತಿಗೆ ವಿವಾಹವಾಗುವುದಾಗಿ ಆರೋಪಿ ಭರವಸೆ ನೀಡಿದ್ದ. ಬಳಿಕ ಹೋಟೆಲ್‌ವೊಂದಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದ. ನಂತರ, ಇಶಾಕ್ ಬೇರೊಂದು ಯುವತಿಯ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಸಂಬಂಧ ಸಂತ್ರಸ್ತೆಯು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಕೃತ್ಯವು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ಆ ಠಾಣೆಗೆ ವರ್ಗಾಯಿಸಲಾಗಿದೆ. ಅಮೃತಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.