
ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದ ಒಂದು ರೈಲಿನಲ್ಲಿ ಶನಿವಾರ ಸಂಜೆ ತಾಂತ್ರಿಕ ಸಮಸ್ಯೆ ಉಂಟಾಗಿದ್ದರಿಂದ ಮೆಟ್ರೊ ರೈಲುಗಳ ಸಂಚಾರ ವಿಳಂಬವಾಯಿತು.
ಸಂಜೆ 4.45ಕ್ಕೆ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಯಿತು. ಇದರಿಂದಾಗಿ ರಾಷ್ಟ್ರೀಯ ವಿದ್ಯಾಲಯ ರಸ್ತೆ–ಬೊಮ್ಮಸಂದ್ರ ನಡುವೆ ಸಂಚರಿಸುವ ರೈಲುಗಳ ಸಂಖ್ಯೆ 4ಕ್ಕಿಳಿಯಿತು. ಪ್ರತಿ ಟ್ರಿಪ್‌ನ ನಡುವಿನ ಅಂತರವನ್ನು 15 ನಿಮಿಷದ ಬದಲು 19 ನಿಮಿಷಕ್ಕೆ ಹೆಚ್ಚಿಸಲಾಯಿತು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾನುವಾರ 8ಕ್ಕೆ ಸಂಚಾರ: ಹಳದಿ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ನವೀಕರಣ ಕಾರ್ಯಗಳನ್ನು ಹಮ್ಮಿಕೊಂಡಿರುವುದರಿಂದ ಜ.21ರಂದು ಬೆಳಿಗ್ಗೆ 7ರ ಬದಲು 8 ಗಂಟೆಗೆ ಮೆಟ್ರೊ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಮೆಟ್ರೊ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.