
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಗರದಲ್ಲಿ ಮಾರ್ಚ್ 1ರಂದು ನಡೆಯಲಿರುವ ರಾಜ್ಯಮಟ್ಟದ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಮೆಟ್ರೊ ರೈಲು ಸಂಚಾರವನ್ನು ಬೆಳಿಗ್ಗೆ 5 ಗಂಟೆಗೆ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ನೇರಳೆ ಮಾರ್ಗದ ವೈಟ್‌ಫೀಲ್ಡ್ ಮತ್ತು ಚಲ್ಲಘಟ್ಟ, ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ, ಹಳದಿ ಮಾರ್ಗದ ಬೊಮ್ಮಸಂದ್ರ ಮತ್ತು ಆರ್.ವಿ. ರಸ್ತೆ ಟರ್ಮಿನಲ್‌ಗಳಿಂದ ಸಾಮಾನ್ಯವಾಗಿ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಮೆಟ್ರೊ ಸಂಚಾರ ಶುರುವಾಗುತ್ತಿತ್ತು.
ಈ ಭಾನುವಾರ ಮಾತ್ರ ಎರಡು ತಾಸು ಮುಂಚಿತವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.