ಮೆಟ್ರೊ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಡಿ.8ರಂದು ನಡೆಸಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಗೆ ಹಾಜರಾಗುವವರಿಗೆ ಅನುಕೂಲವಾಗುವಂತೆ ‘ನಮ್ಮ ಮೆಟ್ರೊ’ ರೈಲು ಸಂಚಾರವನ್ನು ಅಂದು ಬೆಳಿಗ್ಗೆ 5.30ಕ್ಕೆ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ನಾಲ್ಕು ಟರ್ಮಿನಲ್‌ಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಹಾಗೂ ಮೆಜೆಸ್ಟಿಕ್‌ನಿಂದ ಎಲ್ಲ ನಾಲ್ಕು ಟರ್ಮಿನಲ್ ಕಡೆಗೆ ಭಾನುವಾರ ಬೆಳಿಗ್ಗೆ 5.30ಕ್ಕೆ ರೈಲು ಸಂಚಾರ ಆರಂಭಗೊಳ್ಳಲಿದೆ. ಬೆಳಿಗ್ಗೆ 7ರವರೆಗೆ ಪ್ರತಿ 30 ನಿಮಿಷದ ಆವರ್ತನದಲ್ಲಿ ಮೆಟ್ರೊ ರೈಲು ಚಲಿಸಲಿದೆ. 7 ಗಂಟೆಯ ಬಳಿಕ ಎಂದಿನಂತೆ ರೈಲು ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯ ದಿನಗಳಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಮೆಟ್ರೊ ರೈಲು ಸಂಚಾರ ಆರಂಭವಾಗುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.