
ಪ್ರಜಾವಾಣಿ ವಾರ್ತೆ
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣದರ ಶೇ 5ರಷ್ಟು ಹೆಚ್ಚಳ ಮಾಡುವ ಬಿಎಂಆರ್‌ಸಿಎಲ್ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಸದ್ಯ ಮೆಟ್ರೊ ಪ್ರಯಾಣದ ಕನಿಷ್ಠ ದರ ₹ 10 ಹಾಗೂ ಗರಿಷ್ಠ ದರ ₹ 90 ಇದೆ. ಈ ಪರಿಷ್ಕರಣೆ ಮೂಲಕ ಮೆಟ್ರೊ ಪ್ರಯಾಣದರ ಮತ್ತಷ್ಟು ಏರಿಕೆಯಾಗಲಿದೆ.
ಫೆಬ್ರುವರಿ 9ರಿಂದ ಹೊಸ ದರ ಜಾರಿಗೆ ಬರಲಿದೆ. ದರವು ಕನಿಷ್ಠ ₹ 1 ಹಾಗೂ ಗರಿಷ್ಠ ₹ 5ರಷ್ಟು ಹೆಚ್ಚಳವಾಗಲಿದೆ.
ಬಿಎಂಆರ್‌ಸಿಎಲ್ ಪ್ರತಿ ವರ್ಷ ಶೇ 5ರಷ್ಟು ಪ್ರಯಾಣದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (ಎಫ್‌ಎಫ್‌ಸಿ) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್ ಮಂಡಳಿ ಸಭೆಯಲ್ಲಿ ಚರ್ಚೆ ನಡೆದಿತ್ತು. ಶೇ 5 ಏರಿಸಲು ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರವನ್ನು ಕೇಳಿತ್ತು. ರಾಜ್ಯ ಸರ್ಕಾರವು ಸೋಮವಾರ ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.