ADVERTISEMENT

Bengaluru Metro: ಮೆಟ್ರೊ ಹಳಿಗೆ ಹಾರಿದ ವ್ಯಕ್ತಿಯ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 17:47 IST
Last Updated 11 ಆಗಸ್ಟ್ 2025, 17:47 IST
<div class="paragraphs"><p>ಮೆಟ್ರೊ ರೈಲು</p></div>

ಮೆಟ್ರೊ ರೈಲು

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಲ್ಲಿ ಸೋಮವಾರ ರಾತ್ರಿ 10.04ಕ್ಕೆ ವ್ಯಕ್ತಿಯೊಬ್ಬರು ಮೆಟ್ರೊ ರೈಲು ಬರುವ ಹೊತ್ತಿಗೆ ಹಳಿಗೆ ಹಾರಿದ್ದು, ಮೆಟ್ರೊ ಸಿಬ್ಬಂದಿ ಕೂಡಲೇ ವಿದ್ಯುತ್ ಸರಬರಾಜು ಸ್ಥಗಿತ ಗೊಳಿಸಿ ರಕ್ಸಿಸಿದ್ದಾರೆ. ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿ ಘಟನೆ ನಡೆದಿದ್ದು, ಅರ್ಧಗಂಟೆ ಮೆಟ್ರೊ ಸಂಚಾರ ಸ್ಥಗಿತಗೊಂಡಿತು.

ರಾತ್ರಿ 10.30ರ ನಂತರ ರೈಲು ಪುನರ್ ಆರಂಭಗೊಂಡಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.