

ಬೆಂಗಳೂರು: ಬೆಂಗಳೂರು ಮೆಟ್ರೊದ ಗುಲಾಬಿ ಮಾರ್ಗ 2026ರ ಮೇ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವನ್ನು ಸಂಪರ್ಕಿಸುವ ನಮ್ಮ ಮೆಟ್ರೊ ಗುಲಾಬಿ ಮಾರ್ಗ 2026ರ ಮೇನಲ್ಲಿ ಆರಂಭವಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.
13.76 ಕಿ.ಮೀ ಭೂಗತ ಮಾರ್ಗ ಹೊಂದಿರುವ ಇದು ದಕ್ಷಿಣ ಹಾಗೂ ಉತ್ತರ ಬೆಂಗಳೂರನ್ನು ಬೆಸೆಯುತ್ತದೆ. ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.