
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಿಗ್ಗೆ ವಿಜಯನಗರ– ಹೊಸಹಳ್ಳಿ ನಿಲ್ದಾಣಗಳ ನಡುವೆ ತಾಂತ್ರಿಕ ದೋಷದಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ.
ಬೆಳಿಗ್ಗೆ 9.15ಕ್ಕೆ ವಿಜಯನಗರ–ಹೊಸಹಳ್ಳಿ ನಿಲ್ದಾಣದ ನಡುವೆ ರೈಲು ಕೆಟ್ಟು ನಿಂತಿದೆ. ಇದರಿಂದ ವೈಟ್‌ಫೀಲ್ಡ್– ಚಲ್ಲಘಟ್ಟದ ನಡುವೆ ರೈಲು ಸೇವೆಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದು ಹಸಿರು ಮಾರ್ಗದ ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ.
ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು ಬೆಳಿಗ್ಗೆ 10:15ಕ್ಕೆ ಪುನಾರಂಭವಾಗಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಮೈಸೂರು ರಸ್ತೆ ಮತ್ತು ಚಲ್ಲಘಟ್ಟ ನಡುವಿನ ರೈಲು ಸೇವೆಗಳು ಬೆಳಿಗ್ಗೆ 11 ಗಂಟೆಯ ವೇಳೆಗೆ ಎಂದಿನಂತೆ ಸಂಚರಿಸಲಿವೆ ಎಂದು ಅದು ತಿಳಿಸಿದೆ.
ದಟ್ಟಣೆಯ ಸಮಯದಲ್ಲಿ ರೈಲು ಸಂಚಾರ ವ್ಯತ್ಯಯವಾಗಿದ್ದರಿಂದ ರೈಲು ನಿಲ್ದಾಣದಲ್ಲಿ ಭಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಸೇರಿದ್ದಾರೆ. ಜನರನ್ನು ನಿಯಂತ್ರಣಕ್ಕೆ ತರುವುದರಲ್ಲಿ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.