
ಪ್ರಜಾವಾಣಿ ವಾರ್ತೆ
ಬೆಂಗಳೂರು: ಶ್ರೀರಾಂಪುರದ ಮೆಟ್ರೊ ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ದ್ವಿಚಕ್ರ ವಾಹನಗಳಿಂದ ಪೆಟ್ರೋಲ್ ಕಳವು ಮಾಡಿ ತಪ್ಪಿಸಿಕೊಳ್ಳುವ ವೇಳೆ ಆತನನ್ನು ಹಿಡಿಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಚೂರಿಯಿಂದ ಇರಿದಿದ್ದ ಆರೋಪಿಯನ್ನು ಶ್ರೀರಾಂಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸವೇಶ್ವರನಗರ ನಿವಾಸಿ ವಿನಾಯಕ (22) ಬಂಧಿತ. ಸೆಕ್ಯೂರಿಟಿ ಗಾರ್ಡ್ ಗಿರೀಶ್ ಗಾಯಗೊಂಡವರು.
ಶ್ರೀರಾಂಪುರ ಮೆಟ್ರೊ ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ದ್ವಿಚಕ್ರ ವಾಹನಗಳಿಂದ ಮಂಗಳವಾರ ಮುಂಜಾನೆ ಆರೋಪಿ ಪೆಟ್ರೋಲ್ ಕಳವು ಮಾಡಿ ಬಾಟಲ್‌ಗೆ ತುಂಬಿಸಿಕೊಳ್ಳುತ್ತಿದ್ದ. ಅದನ್ನು ಗಮನಿಸಿದ ಸೆಕ್ಯೂರಿಟಿ ಗಾರ್ಡ್ ಗಿರೀಶ್ ಎಂಬುವವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದರು. ಆಗ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಚೂರಿಯಿಂದ ಸೆಕ್ಯೂರಿಟಿ ಗಾರ್ಡ್‌ಗೆ ಇರಿದಿದ್ದ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.