ADVERTISEMENT

ಪಿಎಂ ಭೇಟಿ: ನಮ್ಮ ಮೆಟ್ರೊ ಹಸಿರು ಮಾರ್ಗದ ಈ ನಿಲ್ದಾಣಗಳು ಇಂದು ತಾತ್ಕಾಲಿಕ ಬಂದ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2025, 3:02 IST
Last Updated 10 ಆಗಸ್ಟ್ 2025, 3:02 IST
<div class="paragraphs"><p>ಮೋದಿ, ನಮ್ಮ ಮೆಟ್ರೊ</p></div>

ಮೋದಿ, ನಮ್ಮ ಮೆಟ್ರೊ

   

ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಕೆಲ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದೆ.

ಈ ಕುರಿತು ಬಿಎಂಆರ್‌ಸಿಎಲ್ ಪ್ರಕಟಣೆ ನೀಡಿದೆ,

ADVERTISEMENT

ಭದ್ರತೆ ದೃಷ್ಟಿಯಿಂದ ಹಾಗೂ ಬಸವನಗುಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಕೋರಿಕೆಯ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಲಾಲ್‌ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ ಮತ್ತು ಆ‌ರ್.ವಿ. ರಸ್ತೆ ಮೆಟ್ರೊ ನಿಲ್ದಾಣಗಳನ್ನು ಸಾರ್ವಜನಿಕರಿಗೆ ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ತಿಳಿಸಿದೆ,

ನಮ್ಮ ಮೆಟ್ರೊ ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆ ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಸೂಚಿಸಲಾಗಿದೆ. ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಹಾಗೂ ಸಾರ್ವಜನಿಕರ ಸಹಕಾರವನ್ನು ಕೋರುತ್ತೇವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ (ಐ.ಟಿ) ಹಬ್‌ ಆಗಿರುವ ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. 

ಮೊದಲು ಕೆಎಸ್‌ಆರ್‌ ರೈಲು ನಿಲ್ದಾಣದಿಂದ ಆರ್‌.ವಿ. ರಸ್ತೆ ಮೆಟ್ರೊ ನಿಲ್ದಾಣಕ್ಕೆ ತೆರಳಲಿರುವ ಪ್ರಧಾನಿ, ಅಲ್ಲಿಂದ ಎಲೆಕ್ಟ್ರಾನಿಕ್‌ ಸಿಟಿವರೆಗೆ ಮೆಟ್ರೊದಲ್ಲಿ ಪ್ರಯಾಣಿಸಲಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ಮಧ್ಯಾಹ್ನ 1ಕ್ಕೆ ಸಮಾರಂಭ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.