ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಒಡಿಶಾದ ಯುವಕ ಮಂಗಳರಾಜ್ ಅವರು ಕೆಲಸ ಮುಗಿಸಿ ಶನಿವಾರ ರಾತ್ರಿ 10.30ರ ಸುಮಾರಿನಲ್ಲಿ ಬಿಳಿ ಶಿವಾಲಯದ ಪೂರ್ವಂಕರ ಅಪಾರ್ಟ್‌ಮೆಂಟ್ ಮುಂಭಾಗದ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತ ಹೋಗುತ್ತಿದ್ದರು.
ಅದೇ ರಸ್ತೆಯಲ್ಲಿ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಮಂಗಳರಾಜ್ ಅವರ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ಘಟನೆ ನಡೆದ ರಸ್ತೆಯಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಾಗಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.