
ನಮ್ಮ ಮೆಟ್ರೊ ಹಳದಿ ಮಾರ್ಗ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: 'ಉದ್ಯಾನ ನಗರಿ ಬೆಂಗಳೂರಿನ ನಮ್ಮ ಮೆಟ್ರೊ ಹಳದಿ ಮಾರ್ಗದ ಒಂದು ರೈಲಿನಲ್ಲಿ ಇಂದು (ಬುಧವಾರ) ಬೆಳಿಗ್ಗೆ ತಾಂತ್ರಿಕ ತೊಂದರೆ ಉಂಟಾಗಿದ್ದು, ಸಮಸ್ಯೆಯನ್ನು ಬಗೆಹರಿಸಲಾಗಿದೆ' ಎಂದು ಬೆಂಗಳೂರು ಮೆಟ್ರೊ ರೈಲು ಕಾರ್ಪೋರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ತಿಳಿಸಿದೆ.
ಈಗ ಹಳದಿ ಮಾರ್ಗದ ಎಲ್ಲ ರೈಲುಗಳು ಎಂದಿನಂತೆ ಸಂಚರಿಸಲಿವೆ ಎಂದು ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬಿಎಂಆರ್‌ಸಿಎಲ್ ಅಧಿಕೃತ ಹೇಳಿಕೆ ನೀಡಿದೆ.
'ಬುಧವಾರ ಬೆಳಿಗ್ಗೆ ಹಳದಿ ಮಾರ್ಗದ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಉಂಟಾದ ಕಾರಣ, ರೈಲು ಸಂಚಾರದಲ್ಲಿ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ' ಎಂದು ಬಿಎಂಆರ್‌ಸಿಎಲ್ ಹೇಳಿತ್ತು.
ಇದಾದ ಬಳಿಕ 'ತಾಂತ್ರಿಕ ಸಮಸ್ಯೆಯನ್ನು ಬೆಳಿಗ್ಗೆ 08:47 ಗಂಟೆಗೆ ಪರಿಹರಿಸಲಾಗಿದೆ. ಹಳದಿ ಮಾರ್ಗದ ಎಲ್ಲ ರೈಲುಗಳು ಈಗ ಎಂದಿನಂತೆ ಸೇವೆಯಲ್ಲಿ ಇವೆ. ರೈಲು ಸೇವೆಗಳು ಪುನರಾರಂಭಗೊಂಡಿದ್ದು, ಈಗ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿವೆ' ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.