ADVERTISEMENT

ಬೆಂಗಳೂರು: ನಾಯಂಡಹಳ್ಳಿ ನಿಲ್ದಾಣದಲ್ಲಿ ಈ 4 ರೈಲುಗಳಿಗೆ ಹೆಚ್ಚುವರಿ ನಿಲುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಫೆಬ್ರುವರಿ 2026, 6:15 IST
Last Updated 17 ಫೆಬ್ರುವರಿ 2026, 6:15 IST
ರೈಲು (ಸಾಂಧರ್ಬಿಕ ಚಿತ್ರ)
ರೈಲು (ಸಾಂಧರ್ಬಿಕ ಚಿತ್ರ)   

ಬೆಂಗಳೂರು: ಇಂದಿನಿಂದ ನಾಲ್ಕು ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಮಾಡಲಿವೆ.

ಮೈಸೂರು-ಕೆಎಸ್ಆರ್ ಬೆಂಗಳೂರು ಸಿಟಿ ಚಾಮುಂಡಿ ಎಕ್ಸ್‌ಪ್ರೆಸ್ (16215/16216), ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್ (17307/17308), ತೂತ್ತುಕುಡಿ–ಮೈಸೂರು ಎಕ್ಸ್‌ಪ್ರೆಸ್ (16235/1 6236) ಮತ್ತು ಮೈಸೂರು-ಪಂಢರಪುರ ಗೋಲ್‌ ಗುಂಬಜ್‌ ಎಕ್ಸ್‌ಪ್ರೆಸ್ (16535/16535) ರೈಲುಗಳಿಗೆ ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ.

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಇಂದು ರೈಲುಗಳ ನಿಲುಗಡೆಗೆ ಚಾಲನೆ ನೀಡಲಿದ್ದಾರೆ. ಜೊತೆಗೆ ಕೆಎಸ್‌ಆರ್‌ ಬೆಂಗಳೂರು–ನಾಯಂಡಹಳ್ಳಿ(ವಿಜಯನಗರ–ಮೈಸೂರು ರಸ್ತೆಯಲ್ಲಿ) ರಸ್ತೆ ಮೇಲ್ಸೆತುವೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.