ADVERTISEMENT

PHOTOS | ಬೆಂಗಳೂರಿನ ನೆಲಮಂಗಲದಲ್ಲಿ ಹೊತ್ತಿ ಉರಿದ ಬಸ್; ಪ್ರಯಾಣಿಕರು ಪಾರು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 4:17 IST
Last Updated 6 ಫೆಬ್ರುವರಿ 2026, 4:17 IST
<div class="paragraphs"><p>​ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ&nbsp;&nbsp;ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. </p></div>

​ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

   

ನೆಲಮಂಗಲ ಸಮೀಪದ ಹನುಮಂತಪುರ ಗೇಟ್ ಬಳಿ ಶುಕ್ರವಾರ ನಸುಕಿನ ವೇಳೆ ಈ ಘಟನೆ ನಡೆದಿದೆ.

​ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್, ಹನುಮಂತಪುರ ಗೇಟ್ ಬಳಿ ಮೊದಲು ಚರಂಡಿಯ ಸ್ಲಾಬ್‌ಗೆ ಡಿಕ್ಕಿ ಹೊಡೆದಿದೆ.

ADVERTISEMENT

ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್, ವೇಗವಾಗಿ ಹೋಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ.

ಡಿಕ್ಕಿ ಹೊಡೆದ ತಕ್ಷಣ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಧಗಧಗನೆ ಉರಿಯಲಾರಂಭಿಸಿದೆ.

ಬಸ್ಸಿನಲ್ಲಿ ಬೆಂಕಿ ಆವರಿಸಿಕೊಳ್ಳುವ ಮೊದಲೇ ಪ್ರಯಾಣಿಕರು ತಕ್ಷಣವೇ ಕೆಳಗಿಳಿದಿದ್ದಾರೆ.

ಇದರಿಂದಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸ್ಥಳೀಯರು ಮತ್ತು ಪ್ರಯಾಣಿಕರು ಬಸ್ಸಿನಿಂದ ದೂರ ಓಡಿ ಜೀವ ಉಳಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.