ADVERTISEMENT

ಬೆಂಗಳೂರು | ಕಾರು ಡಿಕ್ಕಿ: ಮಹಿಳೆಯರಿಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 15:52 IST
Last Updated 14 ಡಿಸೆಂಬರ್ 2025, 15:52 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.

ADVERTISEMENT

ಯಾದಗಿರಿಯವರಾದ ರಂಗಮ್ಮ (45), ಚೌಡಮ್ಮ (50 ) ಮೃತರು.

ಕೂಲಿ ಕಾರ್ಮಿಕರಾದ ಈ ಇಬ್ಬರೂ ರಾಜರಾಜೇಶ್ವರಿ ನಗರದಲ್ಲಿ ತಮ್ಮ ಕುಟುಂಬಗಳ ಜತೆ ವಾಸವಿದ್ದರು. ಏಜೆನ್ಸಿಯೊಂದರ ಮೂಲಕ ಹೊಸಕೆರೆಹಳ್ಳಿ ಟೋಲ್ ಸಮೀಪದ ನೈಸ್ ರಸ್ತೆಯಲ್ಲಿ ಮಣ್ಣು ತೆಗೆಯುವುದು ಮತ್ತಿತರ ಕೆಲಸ ಮಾಡುತ್ತಿದ್ದರು. ಶುಕ್ರವಾರ ಕೆಲಸ ಮುಗಿಸಿ ರಸ್ತೆ ದಾಟುತ್ತಿದ್ದಾಗಲೇ ಮಾಗಡಿ ರಸ್ತೆ ಕಡೆ ತೆರಳುತ್ತಿದ್ದ ಕಾರೊಂದು ಇಬ್ಬರಿಗೂ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದರು ಎಂದು ಪೊಲೀಸರು ತಿಳಿಸಿದರು.

ಕೆಂಗೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಬಳಿಕ ಪರಾರಿಯಾಗಿದ್ದ ಕಾರು ಚಾಲಕ ಸತ್ಯನಾರಾಯಣ ಎಂಬಾತನನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.