
ಜಿಬಿಎ
ಬೆಂಗಳೂರು: ಉತ್ತರ ನಗರ ಪಾಲಿಕೆ ವತಿಯಿಂದ 2025-26ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ಯೋಜನೆಯಡಿ ಬೃಹತ್ ಸ್ವಚ್ಚತಾ ಅಭಿಯಾನವನ್ನು ಮಾರ್ಚ್ 1ರಿಂದ 6ರವರೆಗೆ ಆಯೋಜಿಸಲಾಗಿದೆ ಎಂದು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.
ಪಾಲಿಕೆಯ 44 ವಾರ್ಡ್‌ಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಅಭಿಯಾನ ನಡೆಸಲಾಗುತ್ತದೆ. ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸ್ವಚ್ಚತಾ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಭಾಗವಹಿಸುವಿಕೆ ಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಂಗೋಲಿ ಸ್ಪರ್ಧೆ, ರಸಪ್ರಶ್ನೆ, ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.